Friday, April 19, 2024
spot_imgspot_img
spot_imgspot_img

ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ..!

- Advertisement -G L Acharya panikkar
- Advertisement -

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇಧದ ಅಕ್ಕಿಯನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿ (MSP) ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಮನವಿಯನ್ನು ಪರಿಗಣಿಸಿದ ಪಿಯೂಷ್ ಗೋಯಲ್ ಅವರು ದಿನಾಂಕ. 06.01.22ರಂದು ಕೇಂದ್ರ ಸಚಿವೆ, ಶೋಭಾ ಕರಂದ್ಲಾಜೆಯವರಿಗೆ ಪತ್ರ ಬರೆದು, ಮೇಲ್ಕಾಣಿಸಿದ ಕುಚ್ಚಲಕ್ಕಿ ಪ್ರಭೇಧಗಳನ್ನು MSP ಮೂಲಕ ಖರೀದಿ ಮಾಡಿ ಪಡಿತರದ ಮೂಲಕ ವಿತರಿಸಲು ರಾಜ್ಯ ಸರಕಾರಕ್ಕೆ ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ.

ಕೇಂದ್ರದ ಈ ಅನುಮತಿಯೊಂದಿಗೆ ಉಡುಪಿ-ದಕ್ಷಿಣ ಕನ್ನಡದ ರೈತರ ಕೃಷಿ ಉತ್ಪಾದನೆಗೆ ಇನ್ನು ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಂತಾಗಿದೆ. ಅದಲ್ಲದೇ, ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯಾದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸುವ ಬೇಡಿಕೆಗೆ ಪುಷ್ಟಿ ಸಿಕ್ಕಿದೆ.

ಸ್ಥಳೀಯ ರೈತರ ಹಾಗೂ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಕೆಂದ್ರ ಕೃಷಿ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ಧನ್ಯವಾದಗಳನ್ನು ತಿಳಿಸಿರುತ್ತಾರೆ ಹಾಗೂ ಇದರ ಪ್ರಯೋಜನವನ್ನು ಕ್ಷೇತ್ರದ ಜನತೆ ಪಡೆಯುವಂತೆ ಕೋರಿರುತ್ತಾರೆ.

vtv vitla
- Advertisement -

Related news

error: Content is protected !!