- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಜೆಡಿಎಸ್ ವಿಧಾನಪರಿಷತ್ ಸದಸ್ಯ ಬೋಜೆಗೌಡರಿಗೆ ಕೊರೊನಾ ವಕ್ಕರಿಸಿದೆ. ಇತ್ತೀಚೆಗಷ್ಟೇ ಇವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಅವರ ವರದಿ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಬಗ್ಗೆ ಬೋಜೆಗೌಡರ ಆಪ್ತರು ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ನಿಯಮದ ಪ್ರಕಾರ 14 ದಿನ ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕಿದೆ. ಅಲ್ಲಿಯ ತನಕ ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕಿದೆ. ಕ್ಷೇತ್ರದ ಜನರ ಹಾಗೂ ಅಧಿಕಾರಿಗಳಿಗೆ ಫೋನ್ ನಲ್ಲಿ ಮಾತ್ರ ಸಂಪರ್ಕಕ್ಕೆ ಸಿಗಬಹುದು. ಆದರೆ ಎರಡು ವಾರಗಳ ಕಾಲ ಯಾರ ಭೇಟಿಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
- Advertisement -