Sunday, October 6, 2024
spot_imgspot_img
spot_imgspot_img

ಬೆಳ್ತಂಗಡಿ : ಬೊಲೆರೊ ಬೈಕ್‌ ಗೆ ಡಿಕ್ಕಿ; ಬೈಕ್‌ ನಲ್ಲಿದ್ದ ಮಗಳು ಮೃತ್ಯು, ತಂದೆ ಗಂಭೀರ

- Advertisement -
- Advertisement -

ಬೆಳ್ತಂಗಡಿ : ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತಂದೆಯ ಜೊತೆ ಹೋಗುತ್ತಿದ್ದ ಮಗಳು ಮೃತಪಟ್ಟು, ಬೈಕ್ ಚಾಲಕ (ತಂದೆ) ಗಂಭೀರ ಗಾಯಗೊಂಡ ಘಟನೆ ಮುಂಡಾಜೆಯ ಸೀಟು ಬಳಿ ಇಂದು ಸಂಜೆ ಸಂಭವಿಸಿದೆ.

ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಅವರ ಮಗಳು ಅನರ್ಘ್ಯ (9) ಮೃತಪಟ್ಟ ಬಾಲಕಿ.

ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಅವರ ಮಗಳು ಅನರ್ಘ್ಯ ಉಜಿರೆಯಿಂದ ಬೈಕ್‌ನಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ ಬೊಲೆರೊ ಹಿಂದಿನಿಂದ ಡಿಕ್ಕಿ ಹೊಡೆದು ಬಳಿಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿತ್ತು.

ಗಾಯಗೊಂಡಿದ್ದ ತಂದೆ-ಮಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಅನರ್ಘ್ಯ ಮೃಪಟ್ಟಿರುವುದಾಗಿ ತಿಳಿದುಬಂದಿದೆ. ಅನರ್ಘ್ಯ ಉಜಿರೆ ಎಸ್‌ಡಿಎಂ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ಅಪಘಾತವಾದ ಬಳಿಕ ತಪ್ಪಿಸಿಕೊಂಡಿದ್ದ ಬೊಲೆರೊ ವಾಹನವನ್ನು ಸಾರ್ವಜನಿಕರ ಸಹಕಾರದಿಂದ ಪತ್ತೆ ಹಚ್ಚಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!