- Advertisement -
- Advertisement -





ಕೊಪ್ಪಳ: ಬೈಕ್‌ಗೆ ಬೊಲೆರೋ ವಾಹನ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕರನ್ನು ರಾಜಾಹುಸೇನ್(18), ಆಸೀಫ್(16) ಮತ್ತು ವಾಜಿದ್(19) ಎಂದು ಗುರುತಿಸಲಾಗಿದೆ.
ಈ ಮೂವರು ಶ್ರೀರಾಮನಗರದಿಂದ ಹೊಸಹಳ್ಳಿಗೆ ಬೈಕ್‌ನಲ್ಲಿ ಹೋಗುವಾಗ ಇಂದರಗಿ ಗ್ರಾಮದ ಸಮೀಪ ಬೊಲೆರೋ ವಾಹನ ಢಿಕ್ಕಿಯಾಗಿದೆ. ಅಪಘಾತದ ಬಳಿಕ ಬೊಲೆರೋ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -








