Thursday, June 25, 2026
spot_imgspot_img
spot_imgspot_img

ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು..!

- Advertisement -
- Advertisement -

ಮುಂಬೈ: ಬಾಲಿವುಡ್ ನಟ ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ಬೆಳಗ್ಗೆ ನಟ ಶಿವಸೇನೆ ನಾಯಕ ಗೋವಿಂದ ಅವರ ಕಾಲಿಗೆ ಅವರದೇ ರಿವಾಲ್ವರ್‌ನಿಂದ ಗುಂಡು ತಗುಲಿದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ ಮಿಸ್‌ಫೈರ್‌ ಆಗಿ ಗಾಯವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ನಟ ಅಪಾಯದಿಂದ ಪಾರಾಗಿದ್ದಾರೆ.ಘಟನೆ ನಡೆದ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವ ವೇಳೆ ಘಟನೆ ನಡೆದಿದೆ.

ಮಾಧ್ಯಮಗಳಿಗೆ ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಪ್ರತಿಕ್ರಿಯಿಸಿದ್ದು, ಪರವಾನಗಿ ಪಡೆದ ರಿವಾಲ್ವರ್‌ ಅನ್ನು ಕೇಸ್‌ನಲ್ಲಿ ಇಟ್ಟುಕೊಂಡಿದ್ದರು. ಇಂದು ಕೇಸ್‌ನಿಂದ ತಗೆಯುವಾಗ ರಿವಾಲ್ವರ್‌ ಕೆಳಗೆ ಬಿದ್ದಾಗ ಫೈರ್‌ ಆಗಿ ಬುಲೆಟ್‌ ಕಾಲಿಗೆ ತಗುಲಿದೆ. ವೈದ್ಯರು ಬುಲೆಟ್ ಅನ್ನು ತೆಗೆದ್ದು ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!