Sunday, June 14, 2026
spot_imgspot_img
spot_imgspot_img

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳಿಂದ ಚಾಕು ಇರಿತ..!

- Advertisement -
- Advertisement -

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ತಡರಾತ್ರಿ 2 ಗಂಟೆಗೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಚಾಕು ಇರಿದ ಘಟನೆ ಮುಂಬೈನ ಬಾಂದ್ರಾದಲ್ಲಿ ನಡೆದಿದೆ.

ದರೋಡೆಗೆ ಬಂದಿದ್ದ ದುಷ್ಕರ್ಮಿಗಳು ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಸೈಫ್ ಅಲಿ ಖಾನ್ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದಾರೆ. ಪತ್ನಿ ನಟಿ ಕರೀನಾ ಕಪೂರ್ ಮತ್ತು ಇಬ್ಬರೂ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತಂತೆ ಮುಂಬೈ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ತನಿಖೆಯ ಅಂಗವಾಗಿ ನಟನ ನಿವಾಸಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!