Sunday, June 14, 2026
spot_imgspot_img
spot_imgspot_img

ಬಾಲಿವುಡ್ ನಟಿ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್‌ನಿಂದ ನಿಧನ..!

- Advertisement -
- Advertisement -

ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ (32) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತಿದ್ದ ಇವರು ಇಂದು ಮುಂಜಾನೆ ಉತ್ತರಪ್ರದೇಶದ ಕಾನ್ಸುರದ ಮನೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಮ್ಯಾನೇಜರ್ ಪೂನಂ ಪಾಂಡೆ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್ ಮಾಡಿದ್ದು”ಇಂದಿನ ಬೆಳಗ್ಗೆ ನಮಗೆಲ್ಲರಿಗೂ ಕಠಿಣ ದಿನವಾಗಿತ್ತು. ಗರ್ಭಕಂಠದ ಕ್ಯಾನ್ಸರ್‌ನ ಕಾರಣದಿಂದಾಗಿ ಇಂದು ನಾವು ಪೂನಮ್ ಅವರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಲು ದುಃಖವಾಗುತ್ತಿದೆ. ಈ ದುಃಖದ ಸಮಯದಲ್ಲಿ ನಾವು ನಮ್ಮ ಖಾಸಗಿತನಕ್ಕಾಗಿ ವಿನಂತಿ ಮಾಡುತ್ತಿದ್ದೇವೆ. ಆಕೆಯೊಂದಿಗೆ ಹಂಚಿಕೊಂಡ ಎಲ್ಲಾ ಕ್ಷಣಗಳನ್ನು ನಾವು ನೆನಪಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ. ಅಂತ್ಯ ಸಂಸ್ಕಾರ ಕುರಿತಾದ ಇತರ ಮಾಹಿತಿಗಳು ಇನ್ನಷ್ಟೇ ಬರಬೇಕಿದೆ. ತಮ್ಮ ವಿವಾದಿತ ಮಾತುಗಳಿಂದಲೇ ಪ್ರಖ್ಯಾತಿ ಪಡೆದಿದ್ದ ಪೂನಮ್ ಪಾಂಡೆ, ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಫಾಲೋವರ್‌ಗಳನ್ನು ಹೊಂದಿದ್ದರು.

- Advertisement -

Related news

error: Content is protected !!