Friday, May 3, 2024
spot_imgspot_img
spot_imgspot_img

15ಕ್ಕೂ ಹೆಚ್ಚು ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ..?

- Advertisement -G L Acharya panikkar
- Advertisement -

ಬೆಂಗಳೂರಿನ 15ಕ್ಕೂ ಅಧಿಕ ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಬಂದಿರುವ ಇಮೇಲ್ ನಲ್ಲಿ ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿರಿ. ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಸಾಯಿಸುತ್ತೇವೆ. ನೀವೆಲ್ಲರೂ ಕೂಡ ಅಲ್ಲಾಹುವಿನ ವಿರೋಧಿಗಳು. ನೀವೆಲ್ಲರೂ ಸಾಯಲು ಸಿದ್ಧರಾಗಿರಿ ’ಎಂದು ಇಮೇಲ್​ನಲ್ಲಿ ಬರೆಯಲಾಗಿದೆ.

ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಬೆಂಗಳೂರು ಪೊಲೀಸ್ ಕಮೀಶನರ್ ಬಿ ದಯಾನಂದ ಪೋಷಕರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ, ಬಾಂಬ್ ಪತ್ತೆ ದಳ ಮತ್ತು ನಿಷ್ಕ್ರಿಯ ದಳಗಳನ್ನು ಬೆದರಿಕೆಗೊಳಗಾಗಿರುವ ಎಲ್ಲ ಶಾಲೆಗಳಿಗೆ ಕಳಿಸಲಾಗಿದ್ದು ಅವರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಈ ಮೊದಲು 15 ಶಾಲೆಗಳಿಗೆ ಇ ಮೇಲ್ ಬೆದರಿಕೆ ಬಂದಿತ್ತು ಎಂದು ಹೇಳಲಾಗಿತ್ತು, ಆದರೆ ಇದೀಗ ಬರೋಬ್ಬರಿ 44 ಶಾಲೆಗಳಿಗೆ ಈ ಬೆದರಿಕೆ ಬಂದಿದೆ ಎನ್ನಲಾಗಿದೆ.

ಮುಖ್ಯವಾಗಿ ಬೆದರಿಕೆ ಇಮೇಲ್​ನಲ್ಲಿ ಉಗ್ರವಾದ ಪದಗಳ ಉಲ್ಲೇಖವಾಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇನ್ನು ಸುರಕ್ಷತಾ ದೃಷ್ಟಿಯಿಂದ ಶಾಲಾ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ಕಳುಹಿಸುತ್ತಿದೆ. ಕೆಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಬೆದರಿಕೆ ಇಮೇಲ್ ಕಳುಹಿಸಿರುವವರ ಪತ್ತೆಗೆ ಶೀಘ್ರವೇ ಕಾರ್ಯಾಚರಣೆ ನಡೆಸಲಾಗುವುದು ಎಂದು ಗೃಹ ಮಂತ್ರಿ ತಿಳಿಸಿದ್ದಾರೆ.

- Advertisement -

Related news

error: Content is protected !!