Thursday, July 23, 2026
spot_imgspot_img
spot_imgspot_img

ಬೆಳ್ತಂಗಡಿ: ಈಜಲು ನದಿಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

- Advertisement -
- Advertisement -

ಬೆಳ್ತಂಗಡಿ: ಸ್ನೇಹಿತರೊಂದಿಗೆ ಈಜಲೆಂದು ನದಿಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪಡಂಗಡಿ ಗ್ರಾಮದ ಫಲ್ಗುಣಿ ನದಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಕಾರ್ಯಾಣ ನಿವಾಸಿ ದುಗ್ಗಪ್ಪ ಎಂಬವರ ಪುತ್ರ ನಿಶಾಂತ್ (22) ಎಂದು ಗುರುತಿಸಲಾಗಿದೆ.

ಈತ ತನ್ನ 5 ಮಂದಿ ಸ್ನೇಹಿತರೊಂದಿಗೆ ಮನೆ ಸಮೀಪದ ಹೊಳೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಅವರ ಪೈಕಿ ಓರ್ವ ನೀರಿನಲ್ಲಿ ಮುಳುಗುತ್ತಿದ್ದಾಗ ಆತನ ರಕ್ಷಣೆಗೆ ನಿಶಾಂತ್ ಮುಂದಾಗಿದ್ದರು. ಆದರೆ ಗೆಳೆಯನನ್ನು ರಕ್ಷಿಸಿ ತಾನೇ ನೀರಿನಲ್ಲಿ ಮುಳುಗಿದ್ದಾರೆ ಎಂದು ತಿಳಿದುಬಂದಿದೆ.

ಕೂಡಲೇ ನಿಶಾಂತ್ ಸ್ನೇಹಿತರು ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ತಂದಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ನಿಶಾಂತ್ ಆಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಮೃತ ನಿಶಾಂತ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!