- Advertisement -
- Advertisement -



ಕೊಟ್ಟಿಗೆಹಾರ: 15 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ.
ರಸ್ತೆ ಮೇಲೆ ನಡೆದು ಹೋಗುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದ ಪ್ರೀತಮ್, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನಂತರ ಅವರನ್ನು ಚಿಕ್ಕಮಗಳೂರು ಮಲ್ಲೇಗೌಡ ಸರಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಪ್ರಕರಣ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
- Advertisement -








