Wednesday, July 22, 2026
spot_imgspot_img
spot_imgspot_img

ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

- Advertisement -
- Advertisement -

ಬ್ರಹ್ಮಾವರ : ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಉಡುಪಿ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಮೈರ್‌ಕೋಮೆ ಹಾಲ್ ಡೈರಿ ಬಳಿ ನಡೆದಿದೆ. ಮೃತರನ್ನು ರಿಕ್ಷಾ ಚಾಲಕ ನರಸಿಂಹ ಪೂಜಾರಿ ಎಂದು ಗುರುತಿಸಲಾಗಿದೆ.

ಮಾ.13ರಂದು ಮಧ್ಯಾಹ್ನ ವೇಳೆ ಶಿರೂರು ಮೂರು ಕೈ ಕಡೆಯಿಂದ ಕೊಕ್ಕರ್ಣೆ ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ನಾಯಿ ಅಡ್ಡ ಬಂದಿದ್ದು, ಅದಕ್ಕೆ ನರಸಿಂಹ ಪೂಜಾರಿ ರಿಕ್ಷಾವನ್ನು ಒಮ್ಮೆಲೆ ಎಡಕ್ಕೆ ಚಲಾಯಿಸಿದ್ದರಿಂದ, ರಿಕ್ಷಾದ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ನರಸಿಂಹ ಪೂಜಾರಿ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮಾ.14ರಂದು ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!