Sunday, June 21, 2026
spot_imgspot_img
spot_imgspot_img

ಬ್ರಹ್ಮಾವರ: ಲಾಕರ್‌ನಲ್ಲಿದ್ದ ಲಕ್ಷಾಂತರ ರೂ. ಲಪಟಾಯಿಸಿದ ಡೆಲಿವರಿ ಬಾಯ್..!

- Advertisement -
- Advertisement -

ಬ್ರಹ್ಮಾವರ: ವಿಲ್‍ಕಾರ್ಟ್ ಸೊಲ್ಯುಶನ್ ಕಂಪೆನಿಗೆ ಸಂಬಂಧಿಸಿದ ಲಕ್ಷಾಂತರ ರೂ. ಹಣವನ್ನು ಅದರ ಡೆಲಿವರಿ ಬಾಯ್ ಕಳವು ಮಾಡಿಕೊಂಡು ಹೋಗಿರುವ ಘಟನೆ ಬ್ರಹ್ಮಾವರ ಸಮೀಪದ ಸಾಲಿಕೇರಿ ಎಂಬಲ್ಲಿ ನಡೆದಿದೆ.

ಕಳ್ಳತನ ಮಾಡಿದ ವ್ಯಕ್ತಿ ಸಂತೋಷ ಎಂದು ಗುರುತಿಸಲಾಗಿದೆ.

ಕಂಪನಿಯ ಖಾತೆಯ ಲಾಕರ್ ನಲ್ಲಿದ್ದ 3,25,000ರೂ. ಹಣವನ್ನು ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ ಎಂಬಾತನು ಕಳ್ಳತನ ಮಾಡಿಕೊಂಡು ಹೋಗಿದ್ದು, ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆಯ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!