Monday, May 20, 2024
spot_imgspot_img
spot_imgspot_img

ಪತ್ರಕರ್ತ ಮುಹಮ್ಮದ್ ಅನ್ಸಾರ್ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ…

- Advertisement -G L Acharya panikkar
- Advertisement -

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ವೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ಪತ್ರಕರ್ತರಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ವಿಜಯವಾಣಿ ಪತ್ರಿಕೆಯ ಮೊಹಮ್ಮದ್ ಅನ್ಸಾರ್ ಇನೋಳಿ ಆಯ್ಕೆಯಾಗಿದ್ದಾರೆ. ವಿಜಯವಾಣಿಯಲ್ಲಿ 2019, ಮೇ 21ರಂದು ಪ್ರಕಟಗೊಂಡ ‘ ಸಂಬಂಧ ಗಟ್ಟಿಗೊಳಿಸಿದ ರಮಜಾನ್ ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.

ಹಿರಿಯ ಪತ್ರಕರ್ತರಾದ ಸುರೇಂದ್ರ ಶೆಟ್ಟಿ, ರವಿಪ್ರಸಾದ್ ಕಮಿಲ ಮತ್ತು ಉಪನ್ಯಾಸಕಿ ಸ್ಮಿತಾ ಶೆಣೈ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿಯು ಈ ಆಯ್ಕೆ ನಡೆಸಿದೆ.
ಜುಲೈ1ರಂದು ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು .

- Advertisement -

Related news

error: Content is protected !!