- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಮಹಾಮಾರಿ ಕೊರೊನಾ ವೈರಸ್ ಯಾರನ್ನೂ ಕೂಡ ಬಿಟ್ಟಿಲ್ಲ. ಇದೀಗ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೋನಾರೊ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕು ತಗಲಿರುವ ಬಗ್ಗೆ ಸ್ವತಃ ಜೈರ್ ಬೊಲ್ಸೋನಾರೊ ಅವರೇ ಹೇಳಿಕೊಂಡಿದ್ದಾರೆ.

65 ವರ್ಷ ಜೈರ್ ಬೊಲ್ಸೋನಾರೊ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಆ ಬಳಿಕ ಅವರ ರಿಪೋರ್ಟ್ ಪಾಸಿಟಿವ್ ಬಂದಿದೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ನಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು ಕಳೆದ ಕೆಲ ದಿನಗಳ ಹಿಂದೆ ಅಮೆರಿಕ ರಾಯಭಾರಿ ಟಾಡ್ ಚಾಪ್ಮನ್ ಜತೆ ಜೈರ್ ಬೊಲ್ಸೋನಾರೊ ಬ್ರೆಸಿಲಿಯಾದಲ್ಲಿ ನಡೆದ ಔತಣಕೂಟದಲ್ಲಿ ಭಾಗಿಯಾಗಿದ್ದರು. ಇದಾದ ಮೂರು ದಿನಗಳ ಬಳಿಕ ಬ್ರೆಜಿಲ್ ಅಧ್ಯಕ್ಷರ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ಅಮೆರಿಕ ರಾಯಭಾರಿ ಟಾಡ್ ಚಾಪ್ಮನ್ ಗೂ ಕೊರೊನಾ ಭೀತಿ ಶುರುವಾಗಿದೆ.

- Advertisement -