Saturday, June 13, 2026
spot_imgspot_img
spot_imgspot_img

ವಿವಾಹ ಸಮಾರಂಭದಲ್ಲಿ ವಿಷ ಕುಡಿದ ವಧು-ವರ; ವರ ಸಾವು, ವಧುವಿನ ಸ್ಥಿತಿ ಗಂಭೀರ

- Advertisement -
- Advertisement -

ವಿವಾಹ ಸಮಾರಂಭದಲ್ಲಿ ವಧು-ವರನ ನಡುವೆ ವಾಗ್ವಾದ ನಡೆದು, ಇಬ್ಬರೂ ವಿಷ ಸೇವಿಸಿದ್ದು, 21 ವರ್ಷದ ವರ ಸಾವನ್ನಪ್ಪಿದರೆ, ವಧು ಸ್ಥಿತಿ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ.

ವಿಷ ಸೇವಿಸಿದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ದುರಾದೃಷ್ಟವಶಾತ್‌ ಆಸ್ಪತ್ರೆಯಲ್ಲಿ ವರ ಮೃತಪಟ್ಟಿದ್ದಾನೆ. ವಧು ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ರಂಜಾನ್ ಖಾನ್, ಕನಾಡಿಯಾ ಪ್ರದೇಶದ ಆರ್ಯ ಸಮಾಜ ದೇವಸ್ಥಾನದಲ್ಲಿ ಜಗಳ ನಡೆದ ಕಾರಣ ವರನು ವಿಷ ಸೇವಿಸಿ ತನ್ನ 20 ವರ್ಷದ ವಧುವಿಗೆ ಈ ವಿಷಯವನ್ನು ತಿಳಿಸಿದ್ದಾನೆ. ವರ ವಿಷ ಸೇವಿಸಿರುವುದು ಗೊತ್ತಾದ ತಕ್ಷಣ ವಧು ಕೂಡ ವಿಷ ಕುಡಿದಿದ್ದಾಳೆ.

ವರನ ಕುಟುಂಬ ಸದಸ್ಯರು ಈ ಬಗ್ಗೆ ಮಾತನಾಡಿದ್ದು, ಕಳೆದ ಹಲವು ದಿನಗಳಿಂದ ಮಹಿಳೆ ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು ಮತ್ತು ವರ ಎರಡು ವರ್ಷಗಳ ಕಾಲಾವಕಾಶ ಕೋರಿದಾಗ ಮಹಿಳೆ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

- Advertisement -

Related news

error: Content is protected !!