Friday, August 7, 2026
spot_imgspot_img
spot_imgspot_img

ಸುಳ್ಯ: ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸುಳ್ಯ ಭೇಟಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜ.24) ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.ಪೂರ್ವಾಹ್ನ 11.00 ಗಂಟೆಗೆ ಎಲಿಮಲೆ ಯಲ್ಲಿ ದೇವಚಳ್ಳ ಶಾಲಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ 1.00 ಗಂಟೆಗೆ ಕಾರ್ಯಕರ್ತರೊಂದಿಗೆ ಸಹಭೋಜನದ ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಮಧ್ಯಾಹ್ನ 2.00 ಗಂಟೆಯಿಂದ 4.00 ಗಂಟೆಯವರೆಗೆ ಸಂಸದ ಕ್ಯಾ. ಚೌಟ ಅವರು ಸಾರ್ವಜನಿಕರ ಭೇಟಿಗೆ ಲಭ್ಯವಿದ್ದು, ಸುಳ್ಯ ತಾಲೂಕಿನ ನಾಗರಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ.

ಈ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!