Saturday, May 18, 2024
spot_imgspot_img
spot_imgspot_img

ಬೆಂಗಳೂರು ಕಂಬಳದ ಬಗ್ಗೆ ಸುಖಾಸುಮ್ಮನೆ ಅಪಪ್ರಚಾರ ಮಾಡಿದ ಬಿಟಿವಿ ಮುಖ್ಯಸ್ಥ ಕುಮಾರ್‍ ಬಂಧನ;

- Advertisement -G L Acharya panikkar
- Advertisement -

ಇತಿಹಾಸದಲ್ಲೇ ಮೊದಲ ಬಾರಿಗೆ ಶಾಸಕ ಅಶೋಕ್‌ ಕುಮಾರ್‌ ರೈಯವರ ನೇತೃತ್ವದಲ್ಲಿ ಬೆಂಗಳೂರಿನ ಅರಮೆನೆ ಮೈದಾನದಲ್ಲಿ ರಾಜ ಮಹರಾಜ ಎಂಬ ಹೆಸರಿನ ಜೋಡುಕರೆ ಕಂಬಳ ಬಹಳ ಅದ್ದೂರಿಯಾಗಿ ನಡೆದಿದ್ದು, ಮುಖ್ಯ ಮಂತ್ರಿ, ಮಾಜಿ ಮುಖ್ಯಮಂತ್ರಿ, ಸಚಿವರು, ಸಿನಿಮಾ ತಾರೆಯರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಕಂಬಳದ ಮೆರುಗನ್ನು ಹೆಚ್ಚಿಸಿದರು. ಬೆಂಗಳೂರು ಕಂಬಳ ನಮ್ಮ ಕಂಬಳ ಕಾರ್ಯಕ್ರಮದ ಬಗ್ಗೆ ಬಿಟಿವಿ ಮಾಧ್ಯಮದಲ್ಲಿ ಕಳೆದ ಕೆಲವು ದಿನಗಳಿಂದ ಸುಖಾಸುಮ್ಮನೆ ಅಪಪ್ರಚಾರ ಮಾಡುವ ಉದ್ದೇಶದಿಂದ ಕೆಲವು ಎಪಿಸೋಡ್‌ಗಳನ್ನು ಪ್ರಸಾರ ಮಾಡಲಾಗಿತ್ತು. ಆದರೆ ಇದೀಗ ನಂಬಿಕೆ ದ್ರೋಹ ಹಾಗೂ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಬಿಟಿವಿ ಮುಖ್ಯಸ್ಥ ಜಿ.ಎಂ ಕುಮಾರ್ ಅವರನ್ನು ವಿಜಯನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇತಿಹಾಸದಲ್ಲೇ ಮೊದಲನೇ ಬಾರಿಗೆ ಇಷ್ಟೋಂದು ದೊಡ್ಡ ಮಟ್ಟದಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಬೆಂಗಳೂರು ಕಂಬಳ-ನಮ್ಮ ಕಂಬಳದ ಕಾರ್ಯಕ್ರಮದ ಬಗ್ಗೆ ಕೆಲ ದಿನಗಳಿಂದ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿರುವ ಬಿಟಿವಿ ಮುಖ್ಯಸ್ಥನಿಗೆ ಇಂದು ಕರಾವಳಿ ಜನರ ಹಾಗೂ ಕಂಬಳಾಭಿಮಾನಿಗಳ ಶಾಪ ತಟ್ಟಿದೆ.

ಬಿಟಿವಿ ಎಂಡಿ ಕುಮಾರ್ ವಿರುದ್ದ ಅಶ್ವಿನ್ ಮಹೇಂದ್ರ ಎನ್ನುವವರು 2022 ರಲ್ಲಿ ವಂಚನೆ ಪ್ರಕರಣ ಸಂಬಂಧಿಸಿದಂತೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಬಿಟಿವಿ ಮುಖ್ಯಸ್ಥ ಜಿ.ಎಂ ಕುಮಾರ್ ಮೇಲೆ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದರಿಂದ ಕುಮಾರ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ, ಅವರನ್ನು ಮುಂದಿನ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದೂರುದಾರ ಅಶ್ವಿನ್‌ ಮಹೇಂದ್ರ ಹಾಗೂ ಕುಮಾರ್ ಇಬ್ಬರೂ ಪಾಲುದಾರಿಕೆಯಲ್ಲಿ ಈಗಲ್‌ಸೈಟ್ ಮಿಡಿಯಾ ಕಂಪನಿ ಆರಂಭಿಸಿದ್ದರು. ಇಬ್ಬರೂ ಕಂಪನಿಯ ನಿರ್ದೇಶಕರಾಗಿದ್ದರು. ಆರೋಪಿ ಕುಮಾರ್, ಒಬ್ಬರೇ ಕಾನೂನು ಬಾಹಿರವಾಗಿ ಆಡಳಿತ ಮಂಡಳಿ ಸಭೆ ನಡೆಸಲಾರಂಭಿಸಿದ್ದರು. ಅಶ್ವಿನ್ ಅವರ ದಾಖಲಾತಿಗಳನ್ನು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ಗಳಲ್ಲಿ ಖಾತೆ ತೆರೆದು ಕೋಟಿಗೂ ಹೆಚ್ಚು ವಹಿವಾಟು ನಡೆಸಿದ್ದರೆಂಬ ಆರೋಪವಿತ್ತು.

ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಕುಮಾರ್, ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದರು. ನೋಟಿಸ್ ಜಾರಿಯಾದರೂ ವಿಚಾರಣೆಗೆ ಹೋಗಿರಲಿಲ್ಲ. ಈತನ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಲಯ, ಇತ್ತೀಚೆಗೆ ಎನ್‌ಬಿಡಬ್ಲ್ಯು ಜಾರಿ ಮಾಡಿತ್ತು. ಆರೋಪಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ಶನಿವಾರ ಮನೆಯ ಬಳಿ ವಾಯುವಿಹಾರ ಮಾಡುತ್ತಿದ್ದ ಸಂದರ್ಭದಲ್ಲಿ ಕುಮಾರ್ ಅವರನ್ನು ವಶಕ್ಕೆ ಬಂಧಿಸಲಾಗಿದೆ.

- Advertisement -

Related news

error: Content is protected !!