Wednesday, November 11, 2026
spot_imgspot_img
spot_imgspot_img

ಇಂದು 16 ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೂರನೇ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರ ಸರ್ಕಾರದ ಬಜೆಟ್ ಬಳಿಕ ಇದೀಗ ಇಂದು (ಮಾರ್ಚ್​ 07) ಮಂಡನೆಯಾಗಲಿರೋ 2025ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗ್ಗೆ 9.30ಕ್ಕೆ ಸಚಿವ ಸಂಪುಟ ನಡೆಸಲಿದ್ದು, ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. ಬಳಿಕ ಬೆಳಗ್ಗೆ 10.20ರ ಸುಮಾರಿಗೆ ಬಜೆಟ್​ ಮಂಡನೆ ಮಾಡಲಿದ್ದಾರೆ.

ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ತಮ್ಮ ಅವಧಿಯ ದಾಖಲೆಯನ್ನೇ ಮುರಿದು 16ನೇ ಬಾರಿಗೆ ಬಜೆಟ್ ಮಂಡಿಸಲು ಮುಂದಾಗಿದ್ದು, ಮಂಡಿನೋವಿನ ಕಾರಣದಿಂದ ನಿಂತು ಬಜೆಟ್ ಮಂಡಿಸುವ ಬದಲು ಕುಳಿತು ಬಜೆಟ್ ಓದುವ ಸಾಧ್ಯತೆ ಇದೆ. ಇನ್ನು ಬಜೆಟ್ ಗಾತ್ರ 4 ಲಕ್ಷ ಕೋಟಿ ಮೀರುವ ಸಾಧ್ಯತೆ ಇದೆ.

- Advertisement -

Related news

error: Content is protected !!