Wednesday, July 22, 2026
spot_imgspot_img
spot_imgspot_img

2026 ಬಜೆಟ್‌ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

- Advertisement -
- Advertisement -

ತೊಗರಿಬೇಳೆ, ಸಕ್ಕರೆ, ಉಪ್ಪು, ಅಡುಗೆ ಎಣ್ಣೆ ಒಳಗೊಂಡ ಕಿಟ್‌

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ತೊಗರಿಬೇಳೆ, ಸಕ್ಕರೆ, ಉಪ್ಪು, ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್‌’ ವಿತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

2026-27ನೇ ಸಾಲಿನ ಬಜೆಟ್‌ ಮಂಡನೆ ಮಾಡಿದ ಸಿಎಂ, ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಐದು ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗಾಗಿ 17,167 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ವಿವರಿಸಿದರು

ಪ್ರಸ್ತುತ ನೀಡುತ್ತಿರುವ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಾಗಿ ಪ್ರತಿ ತಿಂಗಳು ಪೌಷ್ಟಿಕಾಂಶವುಳ್ಳ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್‌’ ವಿತರಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈ ಸಾಲಿನಲ್ಲಿ 6,200 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು.

- Advertisement -

Related news

error: Content is protected !!