Wednesday, April 24, 2024
spot_imgspot_img
spot_imgspot_img

ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲು, ಯೋಜನೆಗಳ ಸಮೀಕರಣದಂತ ಕೇಂದ್ರದ ದಾರಿ ಹಿಡಿಯಲಿದ್ದಾರಾ ಸಿಎಂ ಯಡಿಯೂರಪ್ಪ.?

- Advertisement -G L Acharya panikkar
- Advertisement -

ಬೆಂಗಳೂರು : ಕೊರೋನಾ ಲಾಕ್ ಡೌನ್ ಸಂಕಷ್ಟದಿಂದಾಗಿ ರಾಜ್ಯದಲ್ಲಿ ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿ ಉಂಟಾಗಿದೆ. ಇದರಿಂದಾಗಿ ಇಂದಿನ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರದ ಮಾದರಿಯಲ್ಲೇ ಯೋಜನೆಗಳನ್ನು ಸಮೀಕರಣಗೊಳಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ಕೇಂದ್ರದ ದಾರಿಯನ್ನೇ ರಾಜ್ಯ ಕೂಡ ಅನುಸರಿಸಲಿದೆ ಎಂದು ಹೇಳಲಾಗುತ್ತಿದೆ.

ರಾಜ್ಯ ಯೋಜನಾ ಮಂಡಳಿಯಿಂದ ೧,೭೪೫ ಯೋಜನೆಗಳನ್ನು ಸಮೀಕರಣಗೊಳಿಸೋದಕ್ಕೆ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಈ ಬಾರಿಯ ಬಜೆಟ್ ನಲ್ಲಿ ೧ ಕೋಟಿಗಿಂತ ಕಡಿಮೆ ಇರುವ ಎಲ್ಲಾ ಯೋಜನೆಗಳನ್ನು ದೊಡ್ಡ ಯೋಜನೆಗಳ ಜೊತೆಗೆ ವಿಲೀನ್ ಮಾಡಲು ಸಿಎಂ ಯಡಿಯೂರಪ್ಪ ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ೨೦೨೧-೨೨ನೇ ಸಾಲಿ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವ ಸಲುವಾಗಿ ಯೋಜನೆಗಳ ಸಮೀಕರಣಗೊಳಿಸುವ ಪ್ಲಾನ್ ಮಾಡಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

- Advertisement -

Related news

error: Content is protected !!