Saturday, April 27, 2024
spot_imgspot_img
spot_imgspot_img

ವಿಟ್ಲ: ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ; ಪರಾರಿಯಾಗಲು ಯತ್ನಿಸಿದ ಲಾರಿ ಚಾಲಕನನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು!

- Advertisement -G L Acharya panikkar
- Advertisement -

ಬುಡೋಳಿ: ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಬುಡೋಳಿಯ ಬೊಳ್ಳುಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದ್ದು, ಬಸ್ ರಸ್ತೆ ಬದಿಗೆ ವಾಲಿದ್ದು ಯಾವುದೇ ಹಾನಿ ಸಂಭವಿಸಿಲ್ಲ.

ಅಪಘಾತದ ಬಳಿಕ ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಸ್ಥಳೀಯ ಯುವಕರ ತಂಡ ಲಾರಿಯನ್ನು ಬೆನ್ನಟ್ಟಿ ಹಿಡಿದು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!