Friday, April 4, 2025
spot_imgspot_img
spot_imgspot_img

ಕಟ್ಟಡ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆ

- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ಮುಂಬೈ ಸಮೀಪದ ಭಿವಂಡಿಯಲ್ಲಿ ಇಂದು ಮುಂಜಾನೆ 3.40ರ ಸುಮಾರಿಗೆ ಕಟ್ಟಡ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 20 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ಕನಿಷ್ಟ 20 ಮಂದಿ ಕಟ್ಟಡದ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿದೆ. ಇದರಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಭಿವಂಡಿಯ ಪಟೇಲ್ ಕಂಪೌಂಡ್ ನಲ್ಲಿ ಇರುವ ಈ ಕಟ್ಟಡ ಶಿಥಿಲಗೊಂಡಿತ್ತು ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.

ಈ ಸಂಬಂಧ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರ ಮಾಧ್ಯಮದ ಜೊತೆ ಮಾತನಾಡಿ, ಭಿವಾಂಡಿ ಕಟ್ಟಡ ಕುಸಿತದ ದುರಂತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ. ಎಂದು ಮಾಹಿತಿ ನೀಡಿದ್ದಾರೆ.

40 ವರ್ಷ ಹಳೆಯದಾದ ಈ ಕಟ್ಟಡದಲ್ಲಿ ಸುಮಾರು 20 ಕುಟುಂಬಗಳು ನೆಲೆಸಿದ್ದವು ಎಂಬುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!