Friday, May 3, 2024
spot_imgspot_img
spot_imgspot_img

ಅನ್ಯಧರ್ಮದ ಯುವಕನ ಜತೆ ಬುರ್ಖಾಧಾರಿ ಯುವತಿ ತೆರಳುತ್ತಿದ್ದಾಗ ನಿಂದಿಸಿ, ವೀಡಿಯೋ ಚಿತ್ರೀಕರಣ; ಆರೋಪಿ ಅರೆಸ್ಟ್‌

- Advertisement -G L Acharya panikkar
- Advertisement -

ಅನ್ಯಧರ್ಮದ ಯುವಕನ ಜತೆಗೆ ಬುರ್ಖಾಧಾರಿ ಯುವತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ತಡೆದು ನಿಲ್ಲಿಸಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಗಳೂರು ಪೂರ್ವ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಜಾಕೀರ್‌ ಅಹಮದ್‌(22) ಬಂಧಿತ ಆರೋಪಿ.

ಅನ್ಯಧರ್ಮದ ಯುವಕನ ಜತೆಗೆ ದ್ವಿಚಕ್ರ ವಾಹನದಲ್ಲಿ ಬುರ್ಖಾಧಾರಿ ಯುವತಿ ತೆರಳುವಾಗ ಆರೋಪಿ ದ್ವಿಚಕ್ರ ವಾಹನ ಅಡ್ಡಗಟ್ಟಿ ಯುವತಿಯನ್ನು ನಿಂದಿಸಿದ್ದ. ಬುರ್ಖಾ ತೆಗೆಯುವಂತೆ ಯುವತಿಯನ್ನು ಒತ್ತಾಯಿಸಿದ್ದ. ಯುವತಿ ಬುರ್ಖಾ ತೆಗೆಯಲು ನಿರಾಕರಿಸಿದ್ದಕ್ಕೆ ನಿಂದಿಸಿದ್ದ. ಇದನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ.

ಈ ವೀಡಿಯೋವನ್ನು ಟ್ವಿಟರ್‌ನಲ್ಲಿ ಹಲವರು ನಗರ ಪೊಲೀಸರಿಗೆ ಟ್ಯಾಗ್‌ ಮಾಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಪೂರ್ವ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ದಾಖಲಾದ 24 ತಾಸಿನೊಳಗೆ ವಿಡಿಯೋ ಮೂಲ ಹುಡುಕಿ ಆರೋಪಿ ಜಾಕೀರ್‌ ಅಹಮದ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

- Advertisement -

Related news

error: Content is protected !!