Saturday, June 13, 2026
spot_imgspot_img
spot_imgspot_img

ತುಮಕೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಕಾರಿನಲ್ಲಿ ಪತ್ತೆ

- Advertisement -
- Advertisement -

ಬೆಳ್ತಂಗಡಿ : ಬೆಳ್ತಂಗಡಿಯಿಂದ ಬಾಡಿಗೆ ಮಾಡಿಕೊಂಡು ಹೋಗಿದ್ದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಬೆಳ್ತಂಗಡಿ ತಾಲೂಕಿನ ಮದಡ್ಕ ನಿವಾಸಿ ರಫೀಕ್‌ ಎಂಬುವವರಿಗೆ ಸೇರಿದ ಕೆಎ 43 ರಿಜಿಸ್ಟ್ರೇಷನ್‌ ನಂಬರಿನ ಎಸ್‌ಪ್ರೆಸ್‌ ಕಾರಿನಲ್ಲಿ ಸುಟ್ಟು ಹೋದ ಸ್ಥಿತಿಯಲ್ಲಿ ಇಂದು (ಮಾ.22) ಮೂವರ ಶವ ಪತ್ತೆಯಾಗಿದೆ. ಕಾರಿನಲ್ಲಿದ್ದವರನ್ನು ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲ್ ಗ್ರಾಮದ ನಿವಾಸಿ ಇಮ್ಮಿಯಾಜ್ (34) ಎಂದು ಗುರುತಿಸಲಾಗಿದೆ.
ಮೂವರು ಯಾವ ಕಾರಣಕ್ಕೆ ಸಂಬಂಧಪಟ್ಟಂತೆ ತುಮಕೂರು ಕಡೆಗೆ ಹೋಗಿದ್ದರು ಎಂದು ಇನ್ನೂ ತಿಳಿದು ಬಂದಿಲ್ಲ. ಐದು ಜನರು ಕಾರಿನಲ್ಲಿದ್ದು, ಇಬ್ಬರು ನಾಪತ್ತೆ ಎನ್ನಲಾಗಿದೆ. ಇದೀಗ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಸ್ಥಳಕ್ಕೆ ಎಸ್ಪಿ ಅಶೋಕ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!