Sunday, May 19, 2024
spot_imgspot_img
spot_imgspot_img

ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ; 9 ಮಂದಿ ಗಂಭೀರ ಗಾಯ

- Advertisement -G L Acharya panikkar
- Advertisement -

ಸರ್ಕಾರಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ ಬಸ್ ಶಿವಮೊಗ್ಗದಿಂದ ತರೀಕೆರೆಗೆ ತೆರಳುತ್ತಿದ್ದು, ಕಾರು ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಉಂಟಾಗಿದೆ.

ಸರ್ಕಾರಿ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!