Wednesday, June 17, 2026
spot_imgspot_img
spot_imgspot_img

ಚಾರ್ಮಾಡಿ ಘಾಟ್ ತಿರುವಿನಲ್ಲಿ ಬಸ್ ಬ್ರೇಕ್ ಫೇಲ್; ತಪ್ಪಿದ ಅನಾಹುತ..!

- Advertisement -
- Advertisement -

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಕಡೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿದೆ. ಇದನ್ನು ಅರಿತ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ರಸ್ತೆಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆಸಿ ಬಸ್ಸನ್ನು ನಿಲ್ಲುವಂತೆ ಮಾಡಿದ್ದಾನೆ. ಯಾವುದೋ ಸಮಸ್ಯೆಯಾಗದೆ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಬಸ್ ನಿಂತಿದೆ.

ಬಸ್ಸಿನಲ್ಲಿದ್ದ 70 ಮಂದಿ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಅತ್ಯಂತ ಅಪಾಯಕಾರಿ ತಿರುವುಗಳಿಂದ ಕೂಡಿರುವ ಚಾರ್ಮಾಡಿ ಘಾಟಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಚಾಲಕ ತೋರಿದ ಸಮಯಪ್ರಜ್ಞೆ ಪ್ರಯಾಣಿಕರ ಜೀವ ಉಳಿಸಿದೆ.

- Advertisement -

Related news

error: Content is protected !!