Wednesday, May 1, 2024
spot_imgspot_img
spot_imgspot_img

ಧಗಧಗನೆ ಹೊತ್ತಿ ಉರಿದ ಬಸ್; ತಪ್ಪಿದ ಅನಾಹುತ..!

- Advertisement -G L Acharya panikkar
- Advertisement -

ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್​​ಗೆ ದಿಢೀರ್​​ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರು ಮೆಜೆಸ್ಟಿಕ್​​ನಲ್ಲಿ ನಡೆದಿದೆ.

ಮೆಜೆಸ್ಟಿಕ್​​ ಪಕ್ಕದಲ್ಲಿ ಇರೋ ಖಾಸಗಿ ಬಸ್‌ಗೆ ಏಕಾಏಕಿ ಬೆಂಕಿ ತಗುಲಿದೆ. ಕೆಲವೇ ಕೆಲ ನಿಮಿಷಗಳಲ್ಲಿಯೇ ಬಸ್‌ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಮೆಜೆಸ್ಟಿಕ್​ನ ಅಕ್ಕ ಪಕ್ಕದಲ್ಲೇ ನಿಂತುಕೊಂಡಿದ್ದ ಪ್ರಯಾಣಿಕರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಸದ್ಯ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ತಾಂತ್ರಿಕ ಕಾರಣದಿಂದ ಬೆಂಕಿ ಹೊತ್ತಿರಬಹುದು ಎಂದು ಶಂಕಿಸಲಾಗಿದೆ.

- Advertisement -

Related news

error: Content is protected !!