Monday, June 30, 2025
spot_imgspot_img
spot_imgspot_img

ಬಸ್ – ಕಾರು ಢಿಕ್ಕಿ; ತಾಯಿ, ಮಗ ಮೃತ್ಯು, ಇನ್ನೋರ್ವ ಗಂಭೀರ

- Advertisement -
- Advertisement -

ಸರ್ಕಾರಿ ಬಸ್ ಹಾಗೂ ಪ್ರವಾಸಿಗರ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನೋರ್ವನ ಸ್ಥಿತಿ ಗಂಭೀರವಾದ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ.

ಬೆಂಗಳೂರಿನ ಕೋಣನಕುಂಟೆ ಮೂಲದ ಪೂಜಾ ಹಿರೇಮಠ, ರಾಜಶೇಖರ್ ಹಿರೇಮಠ, ಮೃತ ದುರ್ದೈವಿಗಳಾಗಿದ್ದು, ಶಿವಯಾಗಯ್ಯ ಹಿರೇಮ‌ಠ್ ಎಂಬವರ ಸ್ಥಿತಿ ಗಂಭೀರವಾಗಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಹಾಗೂ ಸಖಲೇಶಪುರದಿಂದ ಮೂಡಿಗೆರೆ ಕಡೆ ಬರುತ್ತಿದ್ದ ಸರ್ಕಾರಿ ಬಸ್‌ ನಡುವೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Insta: glacharyajewellers
Fb: glacharya
- Advertisement -

Related news

error: Content is protected !!