- Advertisement -
- Advertisement -
ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗಳು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕು ರಾಮಶೆಟ್ಟಿಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 206 ಅಂಡರ್ ಪಾಸ್ ಬಳಿ ನಡೆದಿದೆ.
ಮಗಳು ವೀಣಾ(16) ಮತ್ತು ಆಕೆಯ ತಾಯಿ ಕಮಲಮ್ಮ (42) ಮೃತ ತಾಯಿ-ಮಗಳು.
ಇಂದು ಬೆಳಿಗ್ಗೆ 9 ಗಂಟೆ ವೇಳೆಯಲ್ಲಿ ಕಮಲಮ್ಮನವರು ಬೆಳಗ್ಗೆ 10ನೇ ತರಗತಿ ಓದುತ್ತಿದ್ದ ಮಗಳನ್ನು ಶಾಲೆಗೆ ಬಿಡಲು ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಗಾರ್ಮೆಂಟ್ಸ್ ಬಸ್‌ವೊಂದು ಏಕಾಏಕಿ ತಾಯಿ- ಮಗಳಿಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಹಾರಿ ಬಿದ್ದ ತಾಯಿ -ಮಗಳು ಸ್ಥಳದಲ್ಲೇ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆ ಸಂಬಂಧ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -