Saturday, June 6, 2026
spot_imgspot_img
spot_imgspot_img

ಸ್ಕೂಟರ್‌ಗೆ ಬಸ್ ಡಿಕ್ಕಿ; ವಿದ್ಯಾರ್ಥಿನಿ ಸಾವು..!

- Advertisement -
- Advertisement -

ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾಔನ್ನಪ್ಪಿದ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ಕುಸುಮಿತಾ (22) ಎಂದು ಗುರುತಿಸಲಾಗಿದೆ.

ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ಕೂಡಲೇ ಆಕೆಯನ್ನು ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಯಾರ ನಿರ್ಲಕ್ಷ್ಯ ನಡೆದಿದೆ ಎಂಬ ಬಗ್ಗೆ ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ. ಇನ್ನೂ ಘಟನೆಗೆ ವೇಗವಾಗಿ ಬಸ್ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಲ್ಲೇಶ್ವರಂ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!