Sunday, April 28, 2024
spot_imgspot_img
spot_imgspot_img

ಬಸ್ ಡಿಕ್ಕಿ; ಸೈಕಲ್ ಸವಾರ ಮೃತ್ಯ..!

- Advertisement -G L Acharya panikkar
- Advertisement -

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೊಳ್ಳೇಗಾಲ ನಿವಾಸಿ ನಿಂಗಪ್ಪ (60) ಎಂದು ಗುರುತಿಸಲಾಗಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋಗೆ ಸೇರಿದ ಬಸ್ ಡಿಕ್ಕಿಯಾಗಿ ಸೈಕಲ್ ಸವಾರ ಸಾವನ್ನಪ್ಪಿದ್ದಾರೆ. ಈ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!