Monday, May 6, 2024
spot_imgspot_img
spot_imgspot_img

ಸೇತುವೆಯಿಂದ ಉರುಳಿ ಬಿದ್ದ ಬಸ್ಸು; 15 ಮಂದಿ ಮೃತ್ಯು, ಹಲವರಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -
vtv vitla

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಇಂದೋರ್‌ಗೆ ತೆರಳುತ್ತಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್‌ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ.

ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಸ್ಕಿಡ್ ಆಗಿ ಕೆಳಕ್ಕೆ ಬಿದ್ದಿದೆ. ಅಪಘಾತದ ಸಮಯದಲ್ಲಿ ಬಸ್​ನಲ್ಲಿ 50 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಸಣ್ಣ ಗಾಯಾಳುಗಳಿಗೆ 25 ಸಾವಿರ ರೂ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ಮಧ್ಯಪ್ರದೇಶ ಸರ್ಕಾರ ವ್ಯವಸ್ಥೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!