Tuesday, July 21, 2026
spot_imgspot_img
spot_imgspot_img

ಕೊಡಗು: ಮಾಕುಟ್ಟದಲ್ಲಿ ನಡು ರಸ್ತೆಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್

- Advertisement -
- Advertisement -

ಮಡಿಕೇರಿ: ಖಾಸಗಿ ಬಸ್ ವೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಡಿ.೧೫ರಂದು ದಕ್ಷಿಣ ಕೊಡಗಿನ ಮಾಕುಟ್ಟ ಹೆದ್ದಾರಿ ವ್ಯಾಪ್ತಿಯಲ್ಲಿ ನಡೆದಿದೆ.

ಕೇರಳ ರಾಜ್ಯಕ್ಕೆ ಸೇರಿದ ಖಾಸಗಿ ಬಸ್ ಇದಾಗಿದ್ದು, ಮಾಕುಟ್ಟದ ಆಂಜನೇಯ ದೇವಾಲಯದ ಬಳಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಬಸ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರು ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದರು. ಆದರೆ ಅಷ್ಟೊತ್ತಿಗಾಗಲೇ ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿತ್ತು. ಅಗ್ನಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.

- Advertisement -

Related news

error: Content is protected !!