Friday, June 19, 2026
spot_imgspot_img
spot_imgspot_img

ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ : ಕಾಂಗ್ರೆಸ್ ಪಕ್ಷದಿಂದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಸ್ಪರ್ಧೆ ಬಹುತೇಕ ಖಚಿತ

- Advertisement -
- Advertisement -

ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ ಅಕ್ಟೋಬರ್ 21 ರಂದು ಹಾಗೂ ಮತ ಎಣಿಕೆ ಅಕ್ಟೋಬರ್ 24 ರಂದು ನಡೆಯಲಿದೆ.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ಜಿ.ಪಂ.ನ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರು ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗುತ್ತಿದೆ ಎಂಬ ಮಾಹಿತಿ ಕಾಂಗ್ರೆಸ್ ನ ಅಂತರಿಕ ವಲಯದಿಂದ ಲಭ್ಯವಾಗಿದೆ.

ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಎಂಎಲ್ಸಿ (MLC Election) ಚುನಾವಣೆಗೆ ಕಾಂಗ್ರೆಸ್ ನಿಂದ ಪ್ರಕಾಶ್ ಶೆಟ್ಟಿ ತುಂಬೆ, ಬಿ.ರಾಜು ಕಾರ್ಕಳ, ರಾಜು ಪೂಜಾರಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಭುಜಂಗ ಶೆಟ್ಟಿ, ಹರಿಪ್ರಸಾದ್ ರೈ ಒಟ್ಟು ಆರು ಮಂದಿಯ ಹೆಸರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದು , ಚಂದ್ರಪ್ರಕಾಶ್ ಶೆಟ್ಟಿ ಅವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ ಅದೇಶ ಹೊರಡಿಸುವುದು ಬಹುತೇಕ ಖಚಿತ ಎಂಬ ಸ್ಪಷ್ಟ ಮಾಹಿತಿಯನ್ನು ಕಾಂಗ್ರೆಸ್ ಮೂಲಗಳು ನೀಡಿವೆ.

- Advertisement -

Related news

error: Content is protected !!