Monday, July 7, 2025
spot_imgspot_img
spot_imgspot_img

ಶೀಘ್ರವೇ ಮುಖ್ಯಮಂತ್ರಿ ರಾಜೀನಾಮೆ’- ವಿಜಯೇಂದ್ರ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತಿ ಶೀಘ್ರದಲ್ಲಿ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಬಿಜೆಪಿ ಮೈಸೂರು ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ರಾಷ್ಟ್ರಮಟ್ಟದಲ್ಲಿ ಒಬಿಸಿ ಮಂಡಳಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ ಎಂದರೆ ಸಿದ್ದರಾಮಯ್ಯನವರ ಮುಖ್ಯಮಂತ್ರಿ ಸ್ಥಾನಪಲ್ಲಟ ಆಗುವುದು ನಿಶ್ಚಿತವಾಗಿದೆ. ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಬೆಂಗಳೂರಿಗೆ ಬಂದು ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತೇನೆ ಎಂದು ಹೇಳಿ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲು ಒಂದು ಭೂಮಿಕೆಯನ್ನು ಈಗಾಗಲೇ ಸಜ್ಜು ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರನ್ನು ಅಖಿಲ ಭಾರತ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಅಂದರೆ ಸಿದ್ದರಾಮಯ್ಯ ನವರ ರಾಜೀನಾಮೆಯನ್ನು ಪಡೆದುಕೊಂಡು ದೆಹಲಿಗೆ ವರ್ಗಾವಣೆ ಮಾಡುವುದಕ್ಕೆ ಈಗಾಗಲೇ ಆದೇಶ ಮಾಡಿದ್ದಾರೆ ಎಂದು ವಿಶ್ಲೇಷಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ನಡೆಯುತ್ತಿದೆ. ಇದರ ಪರಿಣಾಮವೇ ರಾಮನಗರದ ಶಾಸಕ ಡಿ.ಕೆ. ಶಿವಕುಮಾರ್ ಜೊತೆ 100 ಶಾಸಕರ ಬೆಂಬಲವಿದೆ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರಿಗೆ ಸಿದ್ದರಾಮಯ್ಯನವರ ಮೇಲೆ ವಿಶ್ವಾಸ ಹೋಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಬಿ.ಆರ್ ಪಾಟೀಲ್ ಅವರು ಮಾತ್ರ ಒಂದು ಹೆಜ್ಜೆ ಮುಂದೆ ಹೋಗಿ ಸಿದ್ದರಾಮಯ್ಯ ಅವರು ಲಾಟರಿ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದಾರೆ ಎಂದರು.ವಾಸ್ತವಿಕ ಸತ್ಯ ತೆರೆದಿಟ್ಟ ರಾಯರೆಡ್ಡಿಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ರಾಜ್ಯದಲ್ಲಿನ ಹಣಕಾಸು ಪರಿಸ್ಥಿತಿ ಬಗ್ಗೆ ವಾಸ್ತವಿಕ ಸತ್ಯವನ್ನು ತೆರದಿಟ್ಟಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ರಾಯರೆಡ್ಡಿ ಅವರಿಗೆ ಹೆಚ್ಚಿನ ಮಾಹಿತಿ ಇದೆ. ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ವೇತನವನ್ನು ನೀಡಲು ಆಗುತ್ತಿಲ್ಲ.

ಸಿದ್ದರಾಮಯ್ಯ ಅವರು ರಸ್ತೆಗಳು ಹಾಗೂ ಅಭಿವೃದ್ಧಿ ಕೆಲಸಗಳು ಆಗಬೇಕು ಎಂದರೆ ಗ್ಯಾರಂಟಿಗಳನ್ನು ಬಿಡಿ ಎಂದು ತಮ್ಮ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರ ಮುಖೇನ ರಾಜ್ಯದ ಜನರಿಗೆ ಹೇಳಿಸುತ್ತಾರೆ ಎಂದು ವಿಜಯೇಂದ್ರ ಅವರು ಆರೋಪಿಸಿದರು.

- Advertisement -

Related news

error: Content is protected !!