Friday, June 5, 2026
spot_imgspot_img
spot_imgspot_img

ಬೈಂದೂರು: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ಆರೋಪಿಯ ಬಂಧನ, ಸೊತ್ತುಗಳು ವಶಕ್ಕೆ

- Advertisement -
- Advertisement -

ಬೈಂದೂರು: ತಾಲೂಕಿನ ಗೊಳಿಹೊಳೆ ಗ್ರಾಮದ ಬಡ್ಡಿ ಎಂಬಲ್ಲಿನ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕ ಮೇರೆಗೆ ಬೈಂದೂರು ಠಾಣಾ ಪೊಲೀಸ್ ಉಪನಿರೀಕ್ಷಕ ತಿಮ್ಮೇಶ ಬಿ. ಎನ್ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿದಾಗ ಅಕ್ರಮ ಕಲ್ಲು ಗಣಿಗಾರಿಕೆ ಮಾಡುತ್ತಿರುವುದು ಕಂಡುಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ

ಬಂಧಿತ ಆರೋಪಿಯನ್ನು ಕುಂದಾಪುರದ ಮನೋಜ ಮೊಗವೀರ (43) ಎಂದು ಗುರುತಿಸಲಾಗಿದೆ.

ಸರ್ಕಾರಿ ಜಾಗದಲ್ಲಿ ಗಣಿಗಾರಿಕೆ ಮಾಡುತ್ತಿದ್ದ ಆತನನ್ನು ವಿಚಾರಿಸಿದಾಗ ಕಲ್ಲು ಕೋರೆಗೆ ಸಂಬಂಧಿಸಿ ಆತನಲ್ಲಿ ಯಾವುದೇ ಪರವಾನಗಿ ಇಲ್ಲದಿರುವುದು ಕಂಡುಬಂದಿದೆ. ಈತನಿಂದ 35,000ರೂ. ಮೌಲ್ಯದ ಕಲ್ಲು ಕಟ್ಟಿಂಗ್ ಮಾಡುವ ಟಿಲ್ಲರ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!