Saturday, June 28, 2025
spot_imgspot_img
spot_imgspot_img

ಬೈಂದೂರು: ಮೀನು ಸಾಗಾಟ ವಾಹನದಲ್ಲಿ ಅಕ್ರಮ ಗೋ ಸಾಗಾಟ: ಚಾಲಕ ಪರಾರಿ

- Advertisement -
- Advertisement -

ಬೈಂದೂರು: ಮೀನು ಸಾಗಿಸುವ ಮಿನಿ ಇನ್ಸುಲೇಟರ್ ವಾಹನ ಪಲ್ಟಿಯಾಗಿದ್ದು, ಈ ವೇಳೆ ವಾಹನದೊಳಗೆ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ.

ಗುರುವಾರ ರಾತ್ರಿ ಮಿನಿ ಇನ್ಸುಲೇಟರ್‌ ವಾಹನದೊಳಗೆ ಮೀನು ತುಂಬಿರುವ ಟ್ರೇ ಗಳನ್ನು ಇರಿಸಿಕೊಂಡು ಮದ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Related news

error: Content is protected !!