Saturday, July 25, 2026
spot_imgspot_img
spot_imgspot_img

ಕಾನ್ಸಿಡೆಂಟ್ ಗ್ರೂಪ್ ನ ಮಾಲಕ ಸಿ.ಜೆ. ರಾಯ್ ಶೂಟ್ ಮಾಡಿಕೊಂಡು ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು: ಬೆಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದ ದಿಗ್ಗಜ, ‘ಕಾನ್ಸಿಡೆಂಟ್ಸ್ ಗ್ರೂಪ್’ನ ಸಂಸ್ಥಾಪಕ ಮತ್ತು ಮಾಲಕ ಸಿ.ಜೆ. ರಾಯ್ ಶುಕ್ರವಾರ ಜ.30ರಂದು ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಐಟಿ ದಾಳಿಗೆ ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಕೂಡಾ ಐಟಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸಿ.ಜೆ.ರಾಯ್ ತನ್ನ ಗನ್‌ನಿಂದ ಗುಂಡು ಹಾರಿಸಿಕೊಂಡು ಜೀವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು ತಕ್ಷಣ ಎಚ್‌ಎಸ್‌ಆರ್ ಲೇಔಟ್‌ನ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿಜೆ ರಾಯ್ ಮೃತಪಟ್ಟಿದ್ದಾರೆ.

ರಿಯಲ್ ಎಸ್ಟೇಟ್ ಲೇಔಟ್, ಹೋಟೇಲ್, ರೆಸಾರ್ಟ್, ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಿ.ಜೆ.ರಾಯ್ ಬಂಡವಾಳ ಹೂಡಿದ್ದರು. ಯಶಸ್ವಿ ಉದ್ಯಮಿಯಾಗಿದ್ದ ಅವರು ಕಾನ್ಸಿಡೆಂಟ್ ಗ್ರೂಪ್ ಹೆಸರಿನಲ್ಲಿ ಉದ್ಯಮ ನಡೆಸುತ್ತಿದ್ದರು.

ರೋಲ್ಸ್ ರಾಯ್ಸ್ ಕಾರುಗಳನ್ನು ಹೊಂದಿದ್ದ ಸಿ.ಜೆ.ರಾಯ್ ಹತ್ತು ಕೋಟಿ ರೂಪಾಯಿ ಬೆಲೆಬಾಳುವ ಫ್ಯಾಂಟಮ್-8 ಕಾರ್ ಕೂಡಾ ಹೊಂದಿದ್ದರು. ಪ್ರಸಿದ್ದ ರಿಯಾಲಿಟಿ ಶೋಗಳಿಗೆ ಕಾನ್ಸಿಡೆಂಟ್ ಗ್ರೂಪ್ ಪ್ರಾಯೋಜಕತ್ವ ವಹಿಸುತ್ತಿತ್ತು.

ಅಶೋಕ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!