Tuesday, July 21, 2026
spot_imgspot_img
spot_imgspot_img

ಕ್ಯಾಂಪ್ಕೋ ಅಧ್ಯಕ್ಷರಾಗಿ ಎಸ್.ಆರ್. ಸತೀಶ್ಚಂದ್ರ ಆಯ್ಕೆ: ವಿಟ್ಲ ಗ್ರಾಮೀಣ ಸಹಕಾರಿ ಸಂಘದಿಂದ ಅಭಿನಂದನೆ

- Advertisement -
- Advertisement -

ಮಂಗಳೂರು: ಅಂತರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಆರ್. ಸತೀಶ್ಚಂದ್ರ ಅವರಿಗೆ ವಿಟ್ಲ ಗ್ರಾಮೀಣ ಸಹಕಾರಿ ಸಂಘದ ವತಿಯಿಂದ ಕ್ಯಾಂಪ್ಕೋ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಹೆಚ್. ಜಗನ್ನಾಥ್ ಸಾಲಿಯಾನ್ ಅವರು ಎಸ್.ಆರ್. ಸತೀಶ್ಚಂದ್ರ ಅವರಿಗೆ ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಜಯಂತಿ ಹೆಚ್. ರಾವ್, ಶುಭಲಕ್ಷ್ಮಿ, ದಯಾನಂದ ಆಳ್ವ ಕೆ., ದಿವಾಕರ ವಿ., ಗೋವರ್ಧನ ಕುಮಾರ್ ಐ., ಭಾಸ್ಕರ ಶೆಟ್ಟಿ, ರಾಮದಾಸ ಶೆಣೈ ವಿ., ವಿಶ್ವನಾಥ ಎಂ., ಸತೀಶ್ ಪಿ. ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ. ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಿಗೆ ಸಂಘದ ವತಿಯಿಂದ ಶುಭಾಶಯಗಳನ್ನು ತಿಳಿಸಿ, ಕ್ಯಾಂಪ್ಕೋ ಸಂಸ್ಥೆಯ ಮುಂದಿನ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ತಿಳಿಸಲಾಯಿತು.

- Advertisement -

Related news

error: Content is protected !!