Friday, June 19, 2026
spot_imgspot_img
spot_imgspot_img

ಲಾರಿಗೆ ಡಿಕ್ಕಿ ಹೊಡೆದ ಕ್ಯಾಂಟರ್ ; ಇಬ್ಬರು ಮೃತ್ಯು..!

- Advertisement -
- Advertisement -

ಲಾರಿ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರಿನ ಊರುಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಮೃತರು ಹಾಸನ ಹಾಗೂ ಚಿತ್ರದುರ್ಗದವರು ಎನ್ನಲಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ.

ಲಾರಿಗೆ ಈರುಳ್ಳಿ ಹೇರಿಕೊಂಡು ಚಿತ್ರದುರ್ಗ ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕ್ಯಾಂಟರ್ ಹಿಂಬದಿಯಿಂದ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!