- Advertisement -
- Advertisement -



ಸುಬ್ರಹ್ಮಣ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಗೆ ಮಗುಚಿ ಬಿದ್ದು ನಾಲ್ವರು ಗಾಯಗೊಂಡು ಘಟನೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ನಡೆದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ರಾಜ್ಯ ಹೆದ್ದಾರಿ ಮೂಲಕ ಕುಕ್ಕೆ ಸುಬ್ರಹ್ಮಣ್ಯ ಬರುತ್ತಿದ್ದಾಗ ಅಪಘಾತ ನಡೆದಿದ್ದು, ಘಟನೆಯಲ್ಲಿ ಮಡಿಕೇರಿ ಮೂಲದ ಚಾಲಕ ಪ್ರಶಾಂತ್ ಎಂಬವರು ಸಹಿತ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳೀಯ ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,. ಮಗುಚಿಬಿದ್ದ ಕಾರನ್ನು ತೆರವುಗೊಳಿಸುವ ಕಾರ್ಯ ನಡೆದಿದೆ ಎಂದು ತಿಳಿದು ಬಂದಿದೆ.
- Advertisement -








