Saturday, May 18, 2024
spot_imgspot_img
spot_imgspot_img

ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಢಿಕ್ಕಿ; ಇಬ್ಬರು ಗಂಭೀರ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಟೇಲು ಸೇತುವೆ ಬಳಿ ನಡೆಯಿತು.

ಮಾರುತಿ ೮೦೦ ಕಾರು ಮತ್ತು ಸಿಫ್ಟ್ ಡಿಸೈರ್ ಕಾರಿನ ಮಧ್ಯೆ ಅಪಘಾತ ನಡೆದಿದ್ದು ಮಾರುತಿ 800 ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಸಿಫ್ಟ್ ಡಿಸೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಉಪ್ಪಿನಂಗಡಿ ಕಡೆಯಿಂದ ಹಳೆಗೇಟು ಕಡೆಗೆ ಬರುತ್ತಿದ್ದ 800 ಮಾರುತಿ ಕಾರು ಹಳೆಗೇಟಿನಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಸಿಫ್ಟ್ ಡಿಸೈರ್ ಕಾರಿಗೆ ಡಿಕ್ಕಿಯಾಗಿದೆ. ಸಿಫ್ಟ್ ಡಿಸೈರ್ ಕಾರು ರಸ್ತೆಯಂಚಿನ ತಗ್ಗು ಪ್ರದೇಶಕ್ಕೆ ಮಗುಚಿ ಬಿದಿದ್ದು ಮಾರುತಿ 800 ಕಾರು ಸಂಪೂರ್ಣ ನಜುಗುಜ್ಜಾಗಿ ರಸ್ತೆಯಲ್ಲಿ ತಿರುಗಿ ನಿಂತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬೇಕಾಗಿದೆ.

- Advertisement -

Related news

error: Content is protected !!