Friday, June 5, 2026
spot_imgspot_img
spot_imgspot_img

ಕಾಪು:ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಡಿವೈಡರ್ ನಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ. ಮೂವರ ಸ್ಥಿತಿ ಗಂಭೀರ.!

- Advertisement -
- Advertisement -

ಉಡುಪಿ:-ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆಯಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಡಿವೈಡರ್ ನ ಮೇಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಕಾಪು ಹಳೇ ಮೆಸ್ಕಾಂ ಕಚೇರಿ ಹತ್ತಿರ ನಡೆದಿದೆ.

ಕಾರಿನಲ್ಲಿದ್ದ ಚಾಲಕ ಸಹಿತ ಐದು ಮಂದಿ ಗಂಭೀರ ಗಾಯವಾಗಿದೆ.ಆ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಕಾಪುವಿನ ಹಳೇ ಮೆಸ್ಕಾಂ ಕಚೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿದೆ.ಈ ವೇಳೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಉರುಳಿ ಬಿದ್ದಿದೆ.ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜು ಗುಜ್ಜು ಆಗಿದೆ.

- Advertisement -

Related news

error: Content is protected !!