Thursday, July 23, 2026
spot_imgspot_img
spot_imgspot_img

ಅಜಾಗರೂಕ ಚಾಲನೆ; ಕಾರು ತಡೆಗೋಡೆಗೆ ಡಿಕ್ಕಿ – ಹೊತ್ತಿ ಉರಿದ ಕಾರು

- Advertisement -
- Advertisement -

ಪುತ್ತೂರು: ಅಜಾಗರೂಕ ಹಾಗೂ ನಿರ್ಲಕ್ಷ್ಯ ಚಾಲನೆಯ ಪರಿಣಾಮ ಕಾರೊಂದು ರಸ್ತೆ ಬದಿ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿಯಾಗಿ ಬೆಂಕಿಗಾಹುತಿಯಾದ ಘಟನೆ ಶುಕ್ರವಾರ (ಜ.30) ಮಧ್ಯಾಹ್ನ ನಡೆದಿದೆ.


ದಿನಾಂಕ 30.01.2026 ರಂದು ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ KA-05-NN-8222 ಸಂಖ್ಯೆಯ ಕಾರನ್ನು ಹರ್ಷಿತ್ ಜಿ (29), ರಾಜಾಜಿನಗರ, ಬೆಂಗಳೂರು ನಿವಾಸಿ, ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಚಾಲನೆ ಮಾಡುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಕಾರಿಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ.


ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಗಾಯಗಳಾಗಿಲ್ಲವೆಂದು ತಿಳಿದು ಬಂದಿದೆ.
ಈ ಸಂಬಂಧ ಸ್ವಯಂ ದೂರು ದಾಖಲಿಸಿಕೊಂಡ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 19/2026, ಕಲಂ 281 ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!