Thursday, April 18, 2024
spot_imgspot_img
spot_imgspot_img

ಇನ್ನೋವ ಮತ್ತು ಬಲೆನೋ ನಡುವೆ ಮುಖಾಮುಖಿ ಡಿಕ್ಕಿ- ಸ್ಥಳದಲ್ಲಿಯೇ ಇಬ್ಬರ ಸಾವು

- Advertisement -G L Acharya panikkar
- Advertisement -

ಹುಬ್ಬಳ್ಳಿ: ಬಂಡಿವಾಡ ಬಳಿ ಗದಗ-ಹುಬ್ಬಳ್ಳಿ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಇನ್ನೋವಾ ಮತ್ತು ಬಲೆನೋ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಅಪಘಾತಕ್ಕೀಡಾದ ಕಾರು ನಟಿ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ್ದು ಎನ್ನಲಾಗಿದೆ. ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗದತ್ತ ಹೊರಟಿದ್ದ ಬಲೆನೋ ಕಾರಿನ ನಡುವೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿವೆ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

- Advertisement -

Related news

error: Content is protected !!