Sunday, June 14, 2026
spot_imgspot_img
spot_imgspot_img

ನೆಲ್ಯಾಡಿ: ಕಾರು ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ

- Advertisement -
- Advertisement -

ನೆಲ್ಯಾಡಿ: ಆಲ್ಟೊ ಕಾರು ಕೆ ಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿಯಾದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಆಲ್ಟೊ ಕಾರು ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಕಾರು ಚಾಲಕ ಹರ್ಷ ಎಂಬವರು ತೀವ್ರವಾದ ಗಾಯಗೊಂಡು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!