Friday, June 5, 2026
spot_imgspot_img
spot_imgspot_img

ಕಾರು-ಬೈಕ್ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು..!

- Advertisement -
- Advertisement -

ಚಾಮರಾಜನಗರ: ಕಾರು ಮತ್ತು ಬೈಕ್ ನಡುವೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಗರಗನಹಳ್ಳಿ ಗೇಟ್ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಸೋಮಹಳ್ಳಿ ಗ್ರಾಮದ ಮಹದೇವಸ್ವಾಮಿ ಎಸ್ಎಲ್(46) ಎಂದು ಗುರುತಿಸಲಾಗಿದೆ.

ಗುಂಡ್ಲುಪೇಟೆ ಕಡೆಯಿಂದ ಸೋಮಹಳ್ಳಿ ಗ್ರಾಮದ ಕಡೆಗೆ ಬೈಕ್‌‌ನಲ್ಲಿ ಬರುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ತೀವ್ರ ಗಾಯಗಳಾಗಿತ್ತು ಎನ್ನಲಾಗಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!