Sunday, June 7, 2026
spot_imgspot_img
spot_imgspot_img

ಕುಂದಾಪುರ: ಕಾರು ಬೈಕ್‌ಗೆ ಡಿಕ್ಕಿ; ಸವಾರ ಮೃತ್ಯು

- Advertisement -
- Advertisement -

ಕುಂದಾಪುರ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾತ್ರಿ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ ಪೂಜಾರಿ(48) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸು ಚಾಲಕರಾಗಿರುವ ಮಹಾಬಲ ಪೂಜಾರಿ, ಕೊನೆಯ ಟ್ರಿಪ್ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಇವರ ಬೈಕಿಗೆ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ಮಹಾಬಲ ಪೂಜಾರಿ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!