- Advertisement -
- Advertisement -
ಶಿವಮೊಗ್ಗ: ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಆನಂದಪುರ ಸಮೀಪದ ಮುರುಘಾ ಮಠದಲ್ಲಿ ನಡೆದಿದೆ.
ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಎರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದವರು ದೊಡ್ಡಬಳ್ಳಾಪುರ ಮೂಲದವರೆಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಆನಂದಪುರ ಪೋಲೀಸರು ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ.
- Advertisement -