- Advertisement -
- Advertisement -




ವೇಗವಾಗಿ ಬಂದ ಟಾಟಾ ನೆಕ್ಸನ್ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೀದರ್ ಕಮಲನಗರ ತಾಲೂಕಿನ ಸಂಗಮ್ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟ ಯುವಕ ಅಂಕುಶ್ ಮೋಹನ್ ಮೇತ್ರೆ (30) ಎಂದು ಗುರುತಿಸಲಾಗಿದೆ.
ಮಹಾರಾಷ್ಟ್ರದ ತಲೆಗಾಂವ್ ಗ್ರಾಮದಿಂದ ಭಾಲ್ಕಿಯ ಸ್ವಗ್ರಾಮ ಧನ್ನೂರಿಗೆ ಬರುತ್ತಿದ್ದ ಬೈಕ್ ಸವಾರನಿಗೆ ಬೀದರ್ ಕಡೆಯಿಂದ ಬರುತ್ತಿದ್ದ ಟಾಟಾ ನೆಕ್ಸನ್ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕಮಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ತೀವ್ರತೆಗೆ ಕಾರು ಹಾಗೂ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
- Advertisement -